ADVERTISEMENT

ಶೃಂಗೇರಿ: ಸಾಹಿತ್ಯ ಸಮ್ಮೇಳನ ಬ್ಯಾನರ್‌ ತೆರವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 10:34 IST
Last Updated 9 ಜನವರಿ 2020, 10:34 IST

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕೆಲವೆಡೆ ಅಳವಡಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಬ್ಯಾನರ್‌ಗಳನ್ನು ಪಟ್ಟಣ ಪಂಚಾಯಿತಿ ಬುಧವಾರ ಸಂಜೆ ತೆರವುಗೊಳಿಸಿದೆ.

ಬಸ್‌ ನಿಲ್ದಾಣ, ಕಟ್ಟೆವಾಗಿಲು, ಕುರುಬಕೇರಿ, ಸಂತೆ ಮಾರುಕಟ್ಟೆಗಳಲ್ಲಿ ಅಳವಡಿಸಿದ್ದ ಬ್ಯಾನರ್‌ಗಳನ್ನು ಪೊಲೀಸ್ ಸುಪರ್ದಿಯಲ್ಲಿ ತೆರವು ಮಾಡಲಾಗಿದೆ.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವನಾಯಕ್‌ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಬ್ಯಾನರ್‌ ಅಳವಡಿಸಲು ಅನುಮತಿ ಪಡೆದಿಲ್ಲ. ಹೀಗಾಗಿ ತೆರವುಗೊಳಿಸಿದ್ದೇವೆ. ಸಾಹಿತ್ಯ ಸಮ್ಮೇಳನದ್ದು ಮಾತ್ರವಲ್ಲ, ಅನುಮತಿ ಇಲ್ಲದ ಎಲ್ಲ ಬ್ಯಾನರ್‌ಗಳನ್ನೂ ತೆರವು ಮಾಡಿಸಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.