ADVERTISEMENT

ಚಿಕ್ಕಮಗಳೂರು | ತಾಯಿ ಹೆಸರಿಗೆ ಮನೆ: ಬಿಲ್ ಕಲೆಕ್ಟರ್, ಪಿಡಿಒಗೆ ಒಂದು ವರ್ಷ ಸಜೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 22:30 IST
Last Updated 22 ಜುಲೈ 2025, 22:30 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಚಿಕ್ಕಮಗಳೂರು: ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಅಕ್ರಮವಾಗಿ ಮನೆ ಮಂಜೂರು ಮಾಡಿಸಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ₹15 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ಆದೇಶಿಸಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಳಗೂರು ಗ್ರಾಮ ಪಂಚಾಯಿತಿಯಲ್ಲಿ 2010–11ನೇ ಸಾಲಿನಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಎಂ.ಎನ್.ಮಂಜುನಾಥ್ ತನ್ನ ತಾಯಿಗೆ ಅರ್ಹತೆ ಇಲ್ಲದಿದ್ದರೂ ಮನೆ ಮಂಜೂರು ಮಾಡಿಸಿ ಸರ್ಕಾರದಿಂದ ಹಣ ಪಡೆದಿದ್ದರು ಎಂದು ದೂರು ದಾಖಲಾಗಿತ್ತು. 

ADVERTISEMENT

ಲೋಕಾಯುಕ್ತ ಡಿವೈಎಸ್ಪಿಯಾಗಿದ್ದ ಪ್ರಸನ್ನ ವಿ.ರಾಜು ಅವರು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಅಭಿಯೋಜಕ ವಿ.ಟಿ.ಥೋಮಸ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.