ADVERTISEMENT

ಬೆಳ್ಳೂರು: ಮಕ್ಕಳಿಗೆ ನೋಟ್‌ಬುಕ್, ಪೆನ್ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 15:29 IST
Last Updated 1 ಜುಲೈ 2025, 15:29 IST
ನರಸಿಂಹರಾಜಪುರ ತಾಲ್ಲೂಕು ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ದಾನಿಗಳ ಬೆಮ್ಮನೆ ದಯಾನಂದ ನೋಟ್‌ಬುಕ್ ವಿತರಿಸಿದರು
ನರಸಿಂಹರಾಜಪುರ ತಾಲ್ಲೂಕು ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ದಾನಿಗಳ ಬೆಮ್ಮನೆ ದಯಾನಂದ ನೋಟ್‌ಬುಕ್ ವಿತರಿಸಿದರು   

ಬೆಳ್ಳೂರು(ನರಸಿಂಹರಾಜಪುರ): ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಶಾಲೆಯ ಪ್ರಾರಂಭದಿಂದಲೇ ಶ್ರದ್ಧೆಯಿಂದ ಓದಿ ಉತ್ತಮ ಅಂಕ ಪಡೆಯಬೇಕು ಎಂದು ಹರಿಹರಪುರ ಅಭಿನವ ರಮಾನಂದ ಸರಸ್ವತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.

ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ 23 ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಪೆನ್‌ ವಿತರಿಸಿ ಅವರು ಮಾತನಾಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಸುಧಾ ಮಾತನಾಡಿ, ದಾನಿಗಳು ನೀಡಿದ ನೋಟ್‌ಬುಕ್‌ಗಳನ್ನು ವಿದ್ಯಾರ್ಥಿಗಳು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು. ಮುಂದೆ ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಹುದ್ದೆಯಲ್ಲಿದ್ದಾಗ ಇದೇ ರೀತಿ ಮಕ್ಕಳಿಗೆ, ಶಾಲೆಗಳಿಗೆ ದಾನ ನೀಡಬೇಕು ಎಂದರು.

ADVERTISEMENT

ಸಭೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಎಚ್.ಇ.ಮಹೇಶ್, ಎಚ್.ಎಲ್.ಸದಾಶಿವ, ಸಹ ಶಿಕ್ಷಕ ಕೆ.ಆರ್.ದಯಾನಂದ, ಸಹ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.