ADVERTISEMENT

ಬೆಳ್ತಂಗಡಿ: ಗುರುದೇವ ಕಾಲೇಜಿನಲ್ಲಿ ಸಿಇಟಿ, ನೀಟ್ ತರಬೇತಿ ಸಮಾರೋಪ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 4:02 IST
Last Updated 14 ಜೂನ್ 2022, 4:02 IST
ಬೆಳ್ತಂಗಡಿ ಶ್ರೀಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ, ನೀಟ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಮಾತನಾಡಿದರು.
ಬೆಳ್ತಂಗಡಿ ಶ್ರೀಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ, ನೀಟ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಮಾತನಾಡಿದರು.   

ಬೆಳ್ತಂಗಡಿ: ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಬಿಲ್ಲವ ಮಹಿಳಾ ವೇದಿಕೆ ಮತ್ತು ತಾಲ್ಲೂಕು ಯುವ ಬಿಲ್ಲವ ವೇದಿಕೆ ಇವುಗಳ ಸಹಭಾಗಿತ್ವದಲ್ಲಿ ಶ್ರೀಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ ಮತ್ತು ನೀಟ್ ಪರೀಕ್ಷೆಯ ತರಬೇತಿ ಕಾರ್ಯಕ್ರಮದ ಸಮಾರೋಪಗೊಂಡಿತು.

ಶ್ರೀ ಗುರುದೇವ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ. ವಸಂತ ಬಂಗೇರ ಮಾತನಾಡಿ, ‘ಉನ್ನತ ಶಿಕ್ಷಣಕ್ಕೆ ಇಂತಹ ತರಬೇತಿ ಅಗತ್ಯವಿದೆ. ಮುಂದಿನ ವರ್ಷವು ಗುರುದೇವ ಕಾಲೇಜು ವತಿಯಿಂದ ತರಬೇತಿ ನಡೆಸಲಾಗುವುದು. ಇಲ್ಲಿ ತರಬೇತಿ ಪಡೆದು ಅತೀ ಹೆಚ್ಚು ಅಂಕ ಗಳಿಸಿದ ಮೂರು ಮಂದಿಯನ್ನು ಗೌರವಿಸಲಾಗುವುದು’ ಎಂದರು

ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಮಾತನಾಡಿ, ‘ಸಂಘವು ಈ ತರಬೇತಿಗೆ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ ₹ 35 ಸಾವಿರ ವಿನಿಯೋಗ ಮಾಡಿದೆ’ ಎಂದರು.

ADVERTISEMENT

ಉಪನ್ಯಾಸಕ ಗುಣಪ್ರಸಾದ್, ಪ್ರಾಂಶುಪಾಲ ಸುಕೇಶ್ ಕುಮಾರ್ ಇದ್ದರು. ಸಂಘದ ಶೈಕ್ಷಣಿಕ ಸಮಿತಿ ಸಂಚಾಲಕ ಲಕ್ಷ್ಮಣ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಭುವಿತಾ ಮತ್ತು ಅಶ್ವಿತಾ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ಮಾಯಾ ಭಟ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.