
ಬೆಳ್ಳೂರು (ನರಸಿಂಹರಾಜಪುರ): ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಫೆ.21ಮತ್ತು ಫೆ.22ರಂದು ನಡೆಯಲಿರುವ 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹರಿಹರಪುರ ಅಭಿನವ ರಮಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಬೆಮ್ಮನೆ ದಯಾನಂದ್ ಅವರನ್ನು ಆಯ್ಕೆ ಮಾಡಲಾಯಿತು.
ಬೆಳ್ಳೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಚ್ .ಪೂರ್ಣೇಶ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಸಮ್ಮೇಳನದ ಮಹಾ ಪೋಷಕರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಟಿ.ಡಿ.ರಾಜೇಗೌಡ, ಅಧ್ಯಕ್ಷರಾಗಿ ಬೆಳ್ಳೂರು ಆರ್ .ವೆಂಕಟರಮಣಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಅವರನ್ನು ಆಯ್ಕೆ ಮಾಡಲಾಯಿತು. ವಿವಿಧ ಉಪ ಸಮಿತಿಯನ್ನು ರಚಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಚಾಲಕ ಎಸ್.ಎಸ್.ಸಂತೋಷಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್.ಎಚ್.ಪೂರ್ಣೇಶ್ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಗ್ರಾಮಸ್ಥರು, ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ, ಕಸಾಪ ಘಟಕದ ನಿಕಟ ಪೂರ್ವ ಅಧ್ಯಕ್ಷ ಪಿ.ಕೆ.ಬಸವರಾಜ್ ಮಾತನಾಡಿದರು.
ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ, ಸೀನಿಯರ್ ಚೇಂಬರ್ ಅಧ್ಯಕ್ಷ ಎಸ್.ಎಸ್.ಜಗದೀಶ್, ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎನ್.ಎಂ.ಕಾಂತರಾಜ್, ಪ್ರಧಾನ ಕಾರ್ಯದರ್ಶಿ ನಂದಿನಿ ಆಲಂದೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ ಯೋಜನಾಧಿಕಾರಿ ರಾಜೇಶ್, ಮುಖಂಡರಾದ ಈಶ್ವರ ನಾಯಕ್, ಎನ್.ಪಿ.ರಮೇಶ್, ಎಚ್.ಇ.ದಿವಾಕರ, ಪ್ರಶಾಂತ ಶೆಟ್ಟಿ, ಸುನಿಲ್ ಕುಮಾರ್, ಶ್ರೀಹರ್ಷ, ಪ್ರೇಮಶ್ರೀನಿವಾಸ್, ಜಯಶ್ರೀ ಮೋಹನ್, ಸಾಹಿತಿ ಜಯಮ್ಮ, ವಾಣಿ ನರೇಂದ್ರ, ಮಧುಕರ, ಎನ್.ಪಿ.ರವಿ, ಎಚ್.ಇ.ಮಹೇಶ, ಬಿ.ಎಸ್. ಮಂಜುನಾಥ, ಮುಖ್ಯ ಶಿಕ್ಷಕಿ ಸುಧಾ, ಕೊನೋಡಿ ಗಣೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.