ADVERTISEMENT

ಕಳಸ | ನಿವೇಶನಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 14:27 IST
Last Updated 3 ಸೆಪ್ಟೆಂಬರ್ 2024, 14:27 IST
ಕಳಸ ತಾಲ್ಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ಕಚೇರಿಗೆ ನಿವೇಶನರಹಿತರು ಮಂಗಳವಾರ ಮುತ್ತಿಗೆ ಹಾಕಿದರು.
ಕಳಸ ತಾಲ್ಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ಕಚೇರಿಗೆ ನಿವೇಶನರಹಿತರು ಮಂಗಳವಾರ ಮುತ್ತಿಗೆ ಹಾಕಿದರು.   

ಕಳಸ: ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ರಹಿತರು ನಿವೇಶನ ನೀಡುವಂತೆ ಒತ್ತಾಯಿಸಿ ಮಂಗಳವಾರ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಇದಕ್ಕೂ  ಮುನ್ನ ವಸತಿರಹಿತರು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ಕೆಂಬಾವುಟ ಹಿಡಿದು ಘೋಷಣೆ ಕೂಗುತ್ತಾ ಪಂಚಾಯಿತಿ ಕಚೇರಿವರೆಗೆ ಸಾಗಿದರು.

ಪಂಚಾಯಿತಿ ಆವರಣದಲ್ಲಿ ಮಾತನಾಡಿದ ಸಿಪಿಐ ಮುಖಂಡ ಲಕ್ಷ್ಮಣಾಚಾರ್, ‘ಹೊರನಾಡು ಪಂಚಾಯಿತಿಯ ವಸತಿ ರಹಿತರ ಪಟ್ಟಿಯಲ್ಲಿ ಬಹಳಷ್ಟು ನಿವೇಶನ ರಹಿತರ ಹೆಸರು ಬಿಟ್ಟು ಹೋಗಿದೆ. ಅವರ ಹೆಸರನ್ನು ಸೇರ್ಪಡೆ ಮಾಡಬೇಕು. ತುರ್ತಾಗಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಮುಖಂಡ ಗೋಪಾಲ ಶೆಟ್ಟಿ ಮಾತನಾಡಿ, ‘ನಮ್ಮ ಪಕ್ಷ ಕಳೆದ 15 ವರ್ಷದಿಂದ ಸೂರಿಗಾಗಿ ಸಮರ ನಡೆಸುತ್ತಿದ್ದರೂ, ಆಳುವ ಸರ್ಕಾರಗಳು ಈವರೆಗೂ ನಿವೇಶನ ಹಂಚುವ ಕೆಲಸ ಮಾಡಿಲ್ಲ. ಆದ್ದರಿಂದ ಹೋರಾಟದ ಮೂಲಕ ಮತ್ತೆ ಅಧಿಕಾರಿಗಳು ಮತ್ತು ಸರ್ಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ’ ಎಂದರು.

ಸಿಪಿಐ ಮುಖಂಡ ರಮೇಶ್ ಕೆಳಗೂರು, ಪಿಡಿಒ ಅರುಣ ಕುಮಾರ್, ಪಂಚಾಯಿತಿ ಅಧ್ಯಕ್ಷ ಮಧುಪ್ರಸಾದ್ ಇದ್ದರು. ನಿವೇಶನ ಮಂಜೂರು ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.