ಚಿಕ್ಕಮಗಳೂರು: ಕೇರಳದಲ್ಲಿ ಶರಣಾಗಿದ್ದ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಪ್ರಕರಣವೊಂದರ ವಿಚಾರಣೆಗೆ ನಗರದ ನ್ಯಾಯಾಲಯಕ್ಕೆ ಬುಧವಾರ ಪೊಲೀಸರು ಹಾಜರುಪಡಿಸಿದ್ದರು.
ಕೇರಳದ ಜೈಲಿನಲ್ಲಿರುವ ಅವರನ್ನು ಅಲ್ಲಿನ ಪೊಲೀಸರು ಕರೆತಂದಿದ್ದರು. ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು. ಬಿಗಿ ಬಂದೋಬಸ್ತ್‌ನಲ್ಲಿ ಪೊಲೀಸರು ವಾಪಾಸ್ ಕರೆದೊಯ್ದರು.
ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.