ADVERTISEMENT

ಚಿಕ್ಕಮಗಳೂರು: ಹೆಣ್ಣು ಹುಲಿ ಕಳೇಬರ ಪತ್ತೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 17:08 IST
Last Updated 27 ಅಕ್ಟೋಬರ್ 2020, 17:08 IST
ಚಿಕ್ಕಮಗಳೂರು ಜಿಲ್ಲೆಯ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಪತ್ತೆಯಾದ ಹುಲಿ ಕಳೇಬರ.
ಚಿಕ್ಕಮಗಳೂರು ಜಿಲ್ಲೆಯ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಪತ್ತೆಯಾದ ಹುಲಿ ಕಳೇಬರ.   

ಚಿಕ್ಕಮಗಳೂರು: ಜಿಲ್ಲೆಯ ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮಂಗಳವಾರ ಹುಲಿ ಕಳೇಬರ ಪತ್ತೆಯಾಗಿದೆ.

ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಶವ ಕಾಣಿಸಿದೆ. ಸಾವಿಗೆ ಕಾರಣ ತಿಳಿದಿಲ್ಲ.

‌‘ಹೆಣ್ಣು ಹುಲಿ ಕಳೇಬರ ಪತ್ತೆಯಾಗಿದೆ. ವಯಸ್ಸು 5ರಿಂದ 6 ವರ್ಷ. ಮೃತಪಟ್ಟು ಎರಡ್ಮೂರು ದಿನಗಳಾಗಿವೆ’ ಎಂದು ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ತಾಕತ್‌ ಸಿಂಗ್‌ ರಾಣವತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಶಿವಮೊಗ್ಗದಿಂದ ವನ್ಯಜೀವಿ ವಿಭಾಗದ ಪಶುವೈದ್ಯರ ಸ್ಥಳಕ್ಕೆ ಬಂದಿದ್ದಾರೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.