ಕಡೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗ್ರಿಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಕಡೂರು ತಾಲ್ಲೂಕು ಮಚ್ಚೇರಿ ಬಳಿಯ ನಾಯಿಸಾಡ್ಲಿ ಎಂಬಲ್ಲಿ ನಡೆದಿದೆ.
ಕಡೂರು ಕೋಟೆ ಬಡಾವಣೆಯ ನಿವಾಸಿ ಉಮೇಶ್ (40) ಮೃತಪಟ್ಟವರು.
ಕುಂತಿಹೊಳೆಯಿಂದ ಕಡೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾದ ಕಾರಣ ಉಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇವರು ಬೀರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.