ADVERTISEMENT

ಚಾರ್ಮಾಡಿ ಘಾಟಿ: ಮರ ಬಿದ್ದು ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2021, 6:25 IST
Last Updated 7 ನವೆಂಬರ್ 2021, 6:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ (ಸೋಮನ ಕಾಡು ಪ್ರದೇಶ) ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಹಿಂಬದಿ ಸವಾರ ಸಾವಿಗೀಡಾದ ಅವಘಡ ನಸುಕಿನಲ್ಲಿ ಸಂಭವಿಸಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರು ಗ್ರಾಮದ ಜೀವನ್ (21) ಮೃತಪಟ್ಟವರು.

ಜೀವನ್ ತಲೆ ಮೇಲೆ ವೃಕ್ಷ ಉರುಳಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

11 ಜನರು ಆರು ಬೈಕ್ ಗಳಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಅನಾಹುತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.