ಬಂಧನ
(ಪ್ರಾತಿನಿಧಿಕ ಚಿತ್ರ)
ಬೀರೂರು(ಕಡೂರು): ತಂದೆಯೇ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ತಾಯಿ ಆರು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಪ್ರಥಮ ಪಿಯುನಲ್ಲೇ ಬಾಲಕಿ ಓದು ನಿಲ್ಲಿಸಿದ್ದಾಳೆ. ತಂದೆ ಮತ್ತು ಭರತ್ ಶೆಟ್ಟಿ ಎಂಬ ಮತ್ತೊಬ್ಬ ವ್ಯಕ್ತಿ ಸೇರಿ ಮಂಗಳೂರಿಗೆ ಡಿ.21ರಂದು ಕರೆದೊಯ್ದಿದ್ದಾರೆ. ಅಲ್ಲಿ ಎರಡು ದಿನಗಳ ಅವಧಿಯಲ್ಲಿ ಹಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿಯೂ ಆಕೆಯ ತಂದೆ ಕೂಡ ರಕ್ಷಣೆಗೆ ಬಂದಿಲ್ಲ.
ಮನೆಗೆ ಕಳುಹಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಾಲಕಿ ಹೇಳಿದ ಬಳಿಕ ವಾಪಸ್ ಕಳುಹಿಸಿದ್ದಾನೆ. ಮನೆಗೆ ಬಂದ ಬಾಲಕಿ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.
ಭರತ್ ಶೆಟ್ಟಿ ಮತ್ತು ಇತರ ಮೂವರನ್ನು ಬಂಧಿಸಲಾಗಿದ್ದು, ಇನ್ನೂ ಹಲವರನ್ನು ಬಂಧಿಸಬೇಕಿದೆ. ಬಾಲಕಿಯ ಹೇಳಿಕೆ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.