ಕಾಡುಕೋಣ
(ಸಾಂದರ್ಭಿಕ ಚಿತ್ರ)
ಮೂಡಿಗೆರೆ (ಚಿಕ್ಕಮಗಳೂರು): ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಬಸೂರಿ ಬೀಬಿ (42) ಎಂಬ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಳೆಕೋಟೆ ಗ್ರಾಮದ ಕಾಫಿ ಬೆಳೆಗಾರ ರಮೇಶ್ ಅವರ ಕಾಫಿ ತೋಟದಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಕಾಫಿ ಕೊಯ್ಲು ಮಾಡುವುಲ್ಲಿ ನಿರತರಾಗಿದ್ದರು. ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಕಾಡುಕೋಣ ಏಕಾಏಕಿ ಕಾರ್ಮಿಕರ ಮೇಲೆ ದಾಳಿ ನಡೆಸಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.