ADVERTISEMENT

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಶೋಭಾ ಕರಂದ್ಲಾಜೆ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 4:59 IST
Last Updated 3 ಡಿಸೆಂಬರ್ 2021, 4:59 IST
ಮೂಡಿಗೆರೆ ಲ್ಯಾಂಪ್ಸ್ ಭವನದಲ್ಲಿ ಗುರುವಾರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು. ಅಭ್ಯರ್ಥಿ ಎಂ.ಕೆ. ಪ್ರಾಣೇಶ್, ಶಾಸಕ ಎಂ.ಪಿ. ಕುಮಾರಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಲ್ಮುರುಡಪ್ಪ ಇದ್ದರು.
ಮೂಡಿಗೆರೆ ಲ್ಯಾಂಪ್ಸ್ ಭವನದಲ್ಲಿ ಗುರುವಾರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು. ಅಭ್ಯರ್ಥಿ ಎಂ.ಕೆ. ಪ್ರಾಣೇಶ್, ಶಾಸಕ ಎಂ.ಪಿ. ಕುಮಾರಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಲ್ಮುರುಡಪ್ಪ ಇದ್ದರು.   

ಮೂಡಿಗೆರೆ: ಬಿಜೆಪಿ ಸರ್ಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಪಟ್ಟಣದ ಲ್ಯಾಂಪ್ಸ್ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಗ್ರಾಮ ಪಂಚಾಯಿತಿಗಳಿಗೆ ಬಿಡಿಗಾಸು ಅನುದಾನ ಬರುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದೊಡನೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿಗೆ ಗೆಲುವು ತಂದು ಕೊಡಬೇಕು’ ಎಂದರು.

ADVERTISEMENT

‘ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಸಂಸದರು, ಶಾಸಕರು, ಉಸ್ತುವಾರಿ ಮಂತ್ರಿ ನಮ್ಮ ಪಕ್ಷದವರೇ ಇದ್ದಾರೆ. ನಮ್ಮ ಸರ್ಕಾರದ ವಿರುದ್ಧವೇ ಹೋರಾಟ ನಡೆಸಿ ಕ್ಷೇತ್ರದ ಜನರ ಪರವಾಗಿ ನಿಲ್ಲುವ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಜತೆಗೆ ವಿಧಾನ ಪರಿಷತ್‍ಗೆ ಕೂಡ ನಮ್ಮವರನ್ನೇ ಆಯ್ಕೆ ಮಾಡಿದರೆ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ’ ಎಂದರು..

ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ‘ತಾಲ್ಲೂಕಿನಲ್ಲಿ ಅಕಾಲಿಕ ಮಳೆಯಿಂದ ಹಾನಿಯಾದ ಕೆಲವು ಕಾಮಗಾರಿಗಳಿಗೆ ಅಡಚಣೆ ಆಗಿದೆ ಬಿಟ್ಟರೆ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಅಪಾರ ಅನುದಾನವನ್ನು ಒದಗಿಸಿಕೊಡಲಾಗಿದ್ದು, ಬಿಜೆಪಿಗೆ ಮತ ಹಾಕುವುದಿಲ್ಲ ಎನ್ನುವ ಪ್ರಶ್ನೆಯೇ ಇಲ್ಲ. ಈಗಾಗಲೇ ಕ್ಷೇತ್ರದಲ್ಲಿ ಶೇ 60ರಷ್ಟು ಮತಯಾಚನೆ ಮಾಡಲಾಗಿದೆ. ಎಲ್ಲಾ ಕಡೆ ಅಭೂತಪೂರ್ವವಾದ ಬೆಂಬಲ ವ್ಯಕ್ತವಾಗಿದೆ. ನಮ್ಮ ಅಭ್ಯರ್ಥಿ ಗೆಲ್ಲುವುದರಲ್ಲಿ ಸಂಶಯವೇ ಇಲ್ಲ’ ಎಂದರು.

ಅಭ್ಯರ್ಥಿ ಎಂ.ಕೆ. ಪ್ರಾಣೇಶ್, ಬಿಜೆಪಿ ಕಸಬಾ ಹೋಬಳಿ ಅಧ್ಯಕ್ಷ ಪ್ರಶಾಂತ್ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಲ್ಲೂಕು ಅಧ್ಯಕ್ಷ ಜೆ.ಎಸ್. ರಘು, ಪದಾಧಿಕಾರಿಗಳಾದ ಬಿ.ಎನ್. ಜಯಂತ್, ದಿನೇಶ್ ದೇವರುಂದ, ದೇವರಾಜಶೆಟ್ಟಿ, ತಿಮ್ಮಯ್ಯ, ಕಲ್ಲೇಶ್, ಭಾರತೀರವೀಂದ್ರ, ಗಜೇಂದ್ರ, ಸಂಜಯ್, ಪ್ರಮೋದ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.