
ಚಿಕ್ಕಮಗಳೂರು: ಗೃಹ ಸಚಿವ ಜಿ.ಪರಮೇಶ್ವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಎಸ್‌ಸಿ., ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂತೋಷ್ ಕೋಟ್ಯಾನ್, ಗೃಹ ಸಚಿವರಿಗೆ ಅವಹೇಳನವಾಗಿ ಮಾತನಾಡುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ ಎಂದು ವಕೀಲ ಅನಿಲ್‌ಕುಮಾರ್ ದೂರು ನೀಡಿದ್ದಾರೆ.
ನಗರ ಠಾಣೆ ಪೊಲೀಸರು, ಬುಧವಾರ ಸಂಜೆ ಸಂತೋಷ್ ಅವರನ್ನು ಬಂಧಿಸಿದರು. ಠಾಣೆ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು, ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಡುಗಡೆಗೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.