ADVERTISEMENT

ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 11:40 IST
Last Updated 14 ನವೆಂಬರ್ 2020, 11:40 IST
ಸಿ.ಟಿ.ರವಿ
ಸಿ.ಟಿ.ರವಿ   

ಚಿಕ್ಕಮಗಳೂರು:‘ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಸಮಾಲೋಚಿಸಿ ತೀರ್ಮಾನಿಸಲಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

ತಾಲ್ಲೂಕಿನ ದೇವೀರಮ್ಮ ಬೆಟ್ಟದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಯವರ ಮನದಲ್ಲಿ ಸಂಪುಟ ಪುನರ್‌ರಚನೆ ಯೋಚನೆ ಇದೆ. ಚಿಕ್ಕಮಗಳೂರು ಜಿಲ್ಲೆಗೂ ಶೀಘ್ರದಲ್ಲಿ ಉಸ್ತುವಾರಿ ಸಚಿವರ ನೇಮಕ ಆಗುತ್ತದೆ’ ಎಂದು ಉತ್ತರಿಸಿದರು.

ಬಪರ್‌ ವಲಯ; ಉಪಸಮಿತಿ ರಚನೆ: ‘ಹುಲಿ ಯೋಜನೆಯ ಬಫರ್‌ ವಲಯ ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಾಧಕ–ಬಾಧಕಗಳ ಕುರಿತು ಚರ್ಚಿಸಿ ಸಮಿತಿ ನಿರ್ಣಯ ಕೈಗೊಳ್ಳಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ. ಮಾಧುಸ್ವಾಮಿ ಪ್ರತಿಕ್ರಿಯಿಸಿದರು.

ADVERTISEMENT

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದೇ 12ರಂದು ಉಪಸಮಿತಿ ರಚನೆಯಾಗಿದೆ. ಅರಣ್ಯ ಸಚಿವ, ಸಂಸದೀಯ ವ್ಯವಹಾರ ಸಚಿವ, ಇತರ ಐವರು ಸಚಿವರು ಸಮಿತಿಯಲ್ಲಿದ್ದಾರೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.