ADVERTISEMENT

ಪ್ರವೀಣ್‌ ಹತ್ಯೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 5:09 IST
Last Updated 28 ಜುಲೈ 2022, 5:09 IST
ಚಿಕ್ಕಮಗಳೂರಿನಲ್ಲಿ ಬುಧವಾರ ಬಿಜೆಪಿಯವರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಬುಧವಾರ ಬಿಜೆಪಿಯವರು ಪ್ರತಿಭಟನೆ ನಡೆಸಿದರು.   

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಜರಂಗದಳದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಆಜಾದ್‌ ಪಾರ್ಕ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದರು. ಹಂತಕರಿಗೆ ಧಿಕ್ಕಾರ ಕೂಗಿದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್‌ ಹರಿವಿನಗಂಡಿ ಮಾತನಾಡಿ, ಸರ್ಕಾರ ಹಂತಕರನ್ನು ಬಂಧಿಸಿ, ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರೆ ಸಾಲದು. ಅದನ್ನು ಮಾಡಬೇಕು. ಹರ್ಷ, ರಾಜು ಮೊದಲಾದವರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಹಂತಕರನ್ನು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ, 9 ಮಂಡಲದವರು ರಾಜೀನಾಮೆ ನೀಡಿದ್ದೇವೆ. ಹಂತಕರಿಗೆ ಗುಂಡಿಕ್ಕಲು ಗೃಹಸಚಿವರು ಆದೇಶ ನೀಡಬೇಕು. ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಪ್ರವೀಣ್‌ ಹತ್ಯೆಗೆ ನ್ಯಾಯ ಒದಗಿಸಬೇಕು. ಹಂತಕರಿಗೆ ಶಾಸ್ತಿ ಮಾಡಿಸಲು ಮುಖ್ಯಮಂತ್ರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಕಾಂಚನ್‌ ಗೌಡ, ಶಶಿ ಆಲ್ದೂರು, ದಿನೇಶ್, ಸಚಿನ್‌, ಜೀವಂತ್‌, ರಾಜೀವ್‌ ಕಲ್ದೊಡ್ಡಿ, ಅಂಕಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.