ADVERTISEMENT

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 7:29 IST
Last Updated 6 ನವೆಂಬರ್ 2021, 7:29 IST
   

ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ,

ADVERTISEMENT

ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.