ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ
ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು. ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಿಜೆಪಿಯವರು ‘ಗೋ ಬ್ಯಾಕ್ ಸಿದ್ದರಾಮಯ್ಯ’ಘೋಷಣೆ ಕೂಗಿದರು, ಸಾವರ್ಕರ್ ಚಿತ್ರ ಪ್ರದರ್ಶಿಸಿದರು. ಕಾಂಗ್ರೆಸ್‌ನವರು ಸಿದ್ದರಾಮಯ್ಯಗೆ ಜೈ ಘೋಷಣೆ ಮೊಳಗಿಸಿದರು.
ಪೊಲೀಸರು ಎರಡು ಗುಂಪುಗಳನ್ನು ಚದುರಿಸಿದರು.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.