ಕೊಪ್ಪ: ಶಾನುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 156ನೇ ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ, ಶಿಕ್ಷಕ ವೃಂದ, ಶಿವಮೊಗ್ಗದ ರೋಟರಿ ರಕ್ತ ನಿಧಿ, ಮಾವಿನಕಾಯಿ ಸಮನ್ವಯ ಗೆಳೆಯರ ಬಳಗದ ವತಿಯಿಂದ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ ಶಿಬಿರ ಉದ್ಘಾಟಿಸಿ ಮಾತನಾಡಿ, ‘ರಕ್ತದಾನ ಶ್ರೇಷ್ಠದಾನವಾಗಿದೆ. ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ಇದರಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
ಶಾನುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಕರುವಾನೆ, ಶಿವಕರ ಶೆಟ್ಟಿ, ನಂದಿನಿ ಸಂತೋಷ್, ಆನಂದ್, ಮುಖ್ಯ ಶಿಕ್ಷಕಿ ರಾಧಾ ಓಂಕಾರಪ್ಪ, ಅದಿತಿ ಶಾನುವಳ್ಳಿ, ವೆಂಕಟೇಶ್, ಸರೋಜ ಜಯಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.