ಮೂಡಿಗೆರೆ (ಚಿಕ್ಕಮಗಳೂರು): ‘ಆ ತರಹದ ಹೇಳಿಕೆಗಳನ್ನು ಯಾರೂ ಕೊಡಬಾರದು, ಅಂಥ ಹೇಳಿಕೆ ನೀಡಿದ್ದರೆ ಸಿ.ಟಿ.ರವಿ ಅವರನ್ನು ಕರೆದು ಮಾತನಾಡುತ್ತೇನೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಪ್ರತಿಕ್ರಿಯಿಸಿದರು.
‘ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ ಎನ್ನಲಾದ ಹೇಳಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಜನರ ಬೆಂಬಲದಿಂದಲೇ ಅಧಿಕಾರ ಹಿಡಿಯಲು ಸಾಧ್ಯ. ಇಂಥ ಮಾತುಗಳೂ ಯಾರಿಂದಲೂ ಬರಬಾರದು’ ಎಂದರು.
‘ಟಿಕೆಟ್: ನಾಯಕರು ತೀರ್ಮಾನಿಸುವರು’
‘ಮೂಡಿಗೆರೆ ಕ್ಷೇತ್ರದ ಟಿಕೆಟ್ ಗೊಂದಲದ ವಿಚಾರವನ್ನು ಹೆದರಿಸುತ್ತೇವೆ. ಗೆಲ್ಲುವಂಥ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚು ಇರುವುದು ಸ್ವಾಭಾವಿಕ. ಯಾರಿಗೆ ಟಿಕೆಟ್ ನೀಡಬೇಕು ಎಂದು ಕೇಂದ್ರದ ನಾಯಕರು ತೀರ್ಮಾನಿಸುತ್ತಾರೆ’ ಎಂದು ಉತ್ತರಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.