ಮೂಡಿಗೆರೆ: ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟಿಯರಿಂಗ್ ರಾಡ್ ಚಾರ್ಮಾಡಿ ಘಾಟಿ ತಿರುವಿನಲ್ಲಿ ತುಂಡಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದ ಘಟನೆ ಗುರುವಾರ ನಡೆದಿದೆ.
ಶಿವರಾತ್ರಿ ಅಂಗವಾಗಿ ಶಿವಮೊಗ್ಗ ಘಟಕದಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಬಿಡಲಾಗಿತ್ತು. ಧರ್ಮಸ್ಥಳದಿಂದ ವಾಪಸ್ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬಸ್‌ನಲ್ಲಿ 63 ಮಂದಿ ಪ್ರಯಾಣಿಕರಿದ್ದರು. ಸ್ವಲ್ಪ ಮುಂದೆ ಸಾಗಿದ್ದರೂ ಬಸ್ ಪ್ರಪಾತಕ್ಕೆ ಬೀಳುತ್ತಿತ್ತು. ಆದರೆ, ಚಾಲಕನ ಸಮಯಪ್ರಜ್ಞೆ, ಮತ್ತು ಚಾಲನಾ ಕೌಶಲದಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ’ ಎಂದು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಶಿವಮೊಗ್ಗಕ್ಕೆ ಕಳುಹಿಸಿ ಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.