ADVERTISEMENT

ನರಸಿಂಹರಾಜಪುರ | ಕಾರು ಅಪಘಾತ: ವ್ಯಕ್ತಿ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 24 ಮೇ 2025, 16:24 IST
Last Updated 24 ಮೇ 2025, 16:24 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ನರಸಿಂಹರಾಜಪುರ: ದಾವಣ ಗ್ರಾಮದ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದ ಕಾರು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ADVERTISEMENT

ತಾಲ್ಲೂಕಿನ ಬಾಳೆ ಗ್ರಾಮದ ಕುಡ್ನಳ್ಳಿಯ ನಿವಾಸಿ ಕೆ.ಡಿ.ಅಶ್ವಥ್ (33) ಮೃತಪಟ್ಟವರು. ಅಶ್ವಥ್ ಹಾಗೂ ನಾಲ್ಕು ಜನ ಸ್ನೇಹಿತರು ಬಾಳೆಹೊನ್ನೂರಿಗೆ ಮದುವೆಯ ನೆಂಟರ ಊಟಕ್ಕೆ ಹೋಗಿ ಹಿಂತಿರುಗಿ ಬರುವಾಗ ದಾವಣ ಬಸ್ ನಿಲ್ದಾಣದ ಸಮೀಪ ಮುಂಭಾಗದಲ್ಲಿ ಹೋಗುತ್ತಿದ್ದ ಕಾರನ್ನು ಹಿಂದಿಕ್ಕಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಶ್ವಥ್ ತಲೆಗೆ ತೀವ್ರತರಹದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಉಳಿದವರ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.