ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಹರಿಹರಪುರ ಸಮೀಪದ ಸಿಗದಾಳು ಬಳಿ ಸೋಮವಾರ ತಡರಾತ್ರಿಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಕೊಪ್ಪದ ರಾಜಶೇಖರ್ (51), ಮಲ್ಲಂದೂರಿನ ಮಣಿಕಂಠ (37) ಮೃತಪಟ್ಟವರು. ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಲುವಾಗಿಲು ಕಡೆಯಿಂದ ಕೊಪ್ಪ ಕಡೆಗೆ ತೆರಳುವಾಗ ಅವಘಡ ಸಂಭವಿಸಿದೆ. ಸೇತುವೆ ಸನಿಹದಲ್ಲಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಏರಿ ಪಕ್ಕದ ತಗ್ಗು ಪ್ರದೇಶದ ಗದ್ದೆಗೆ ಉರುಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.