ADVERTISEMENT

ಸಿಸೇರಿಯನ್ ಹೆರಿಗೆಯೇ ಅಧಿಕ

ಖಾಸಗಿ ಆಸ್ಪತ್ರೆಗಳಲ್ಲಿ ಶೇ 21ರಷ್ಟು ಮಾತ್ರ ಸಹಜ ಹೆರಿಗೆ

ವಿಜಯಕುಮಾರ್ ಎಸ್.ಕೆ.
Published 6 ಆಗಸ್ಟ್ 2025, 4:46 IST
Last Updated 6 ಆಗಸ್ಟ್ 2025, 4:46 IST

ಚಿಕ್ಕಮಗಳೂರು: ಜಿಲ್ಲೆಯ ಆಸ್ಪತ್ರೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಹಜ ಹೆರಿಗೆ ಪ್ರಕರಣಗಳು ಕಡಿಮೆಯಾಗುತ್ತಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ 1,809 ಸಿಸೇರಿಯನ್ ಹೆರಿಗೆಗಳಾಗಿವೆ.

2025–26ನೇ ಸಾಲಿನಲ್ಲಿ ಈವರೆಗೆ ಒಟ್ಟು 2,908 ಹೆರಿಗೆಯಾಗಿದ್ದರೆ, ಶೇ 62ರಷ್ಟು ಹೆರಿಗೆ ಸಿಸೇರಿಯನ್ ಹೆರಿಗೆಯಾಗಿದೆ ಎಂದು ಆರೋಗ್ಯ ಇಲಾಖೆ ಅಂಕಿ–ಅಂಶಗಳು ಹೇಳುತ್ತಿವೆ. 

ಅದರಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನದಾಗಿ ಸಿಸೇರಿಯನ್ ಹೆರಿಗೆಯನ್ನೇ ಮಾಡಿಸಲಾಗುತ್ತಿದೆ ಎಂಬ ಅಂಶವನ್ನೂ ಅಂಕಿ–ಅಂಶಗಳು ಹೇಳುತ್ತಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಹೆರಿಗೆ ಪ್ರಕರಣಗಳಲ್ಲಿ ಶೇ 52ರಷ್ಟು ಸಹಜ ಮತ್ತು 48ರಷ್ಟು ಸಿಸೇರಿಯನ್ ಆಗಿದ್ದರೆ, ಖಾಸಗಿ ಆಸ್ಪತ್ರೆಗಳಲ್ಲಿ ಶೇ 21ರಷ್ಟು ಸಹಜ ಮತ್ತು ಶೇ 79ರಷ್ಟು ಸಿಸೇರಿಯನ್ ಹೆರಿಗೆ ಮಾಡಿಸಲಾಗಿದೆ.

ADVERTISEMENT

ಸರ್ಕಾರಿ ಆಸ್ಪತ್ರೆಗಳಲ್ಲಿ 1,578 ಹೆರಿಗೆಯಾಗಿವೆ. ಇವುಗಳಲ್ಲಿ 812 ಪ್ರಕರಣಗಳಲ್ಲಿ ಸಹಜ ಹೆರಿಗೆ ಮಾಡಲಾಗಿದೆ. ಉಳಿದಂತೆ 761 ಸಿಜೇರಿಯನ್ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 1,330 ಹೆರಿಗೆಯಾಗಿದ್ದು, ಕೇವಲ 282 ಪ್ರಕರಣಗಳಲ್ಲಿ ಮಾತ್ರ ಸಹಜ ಹೆರಿಗೆ ಮಾಡಿಸಲಾಗಿದೆ. ಉಳಿದಂತೆ 1,048 ಪ್ರಕರಣಗಳಲ್ಲಿ ಸಿಸೇರಿಯನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ನಂತರ ಖಾಸಗಿ//// ಆಸ್ಪತ್ರೆಗೆ ಶಿಫಾರಸು ಮಾಡಿರುವ ಪ್ರಕರಣಗಳು ಹೆಚ್ಚು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಪ್ರಯೋಗಗಳು ನಡೆಯುತ್ತಿದ್ದರೂ ಸಹ ಅತ್ಯಂತ ಸುರಕ್ಷಿತ ಹಾಗೂ ಆರೋಗ್ಯಕರ ಸಹಜ ಹೆರಿಗೆ ಪ್ರಮಾಣ ಜಿಲ್ಲೆಯಲ್ಲಿ ಕಡಿಮೆಯಾಗಿದೆ. ಸಹಜ ಹೆರಿಗೆಗೆ ಒತ್ತು ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆದರೆ, ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.