ADVERTISEMENT

ಚಾರ್ಮಾಡಿ ಘಾಟಿ: ಅಡುಗೆ ಅನಿಲ ಸಾಗಿಸುತ್ತಿದ್ದ ಲಾರಿ ಪಲ್ಟಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 7:25 IST
Last Updated 24 ಜನವರಿ 2026, 7:25 IST
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ‌ ಘಾಟಿಯಲ್ಲಿ ಶುಕ್ರವಾರ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ‌ ಘಾಟಿಯಲ್ಲಿ ಶುಕ್ರವಾರ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು   

ಮೂಡಿಗೆರೆ: ಅಡುಗೆ ಅನಿಲ ಸಾಗಿಸುತ್ತಿದ್ದ ಲಾರಿಯೊಂದು ಶುಕ್ರವಾರ ಸಂಜೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸಮೀಪದ ತಿರುವಿನಲ್ಲಿ ಪಲ್ಟಿಯಾಗಿ ಘಾಟಿಯಲ್ಲಿ ಸಂಚಾರ ವ್ಯತ್ಯಯವಾಗಿತ್ತು.

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಉರುಳಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ವಾಹನವನ್ನು ಬದಿಗೆ ಸರಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ADVERTISEMENT
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ‌ ಘಾಟಿಯಲ್ಲಿ ಶುಕ್ರವಾರ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.