ADVERTISEMENT

ಚಾರ್ಮಾಡಿ: ದಿನಪೂರ್ತಿ ಲಘು ವಾಹನ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 16:31 IST
Last Updated 12 ಆಗಸ್ಟ್ 2021, 16:31 IST
ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿ ರಸ್ತೆಯ ದೃಶ್ಯ
ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿ ರಸ್ತೆಯ ದೃಶ್ಯ   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿರುವ ನಿರ್ಬಂಧ ಮುಂದುವರಿಸಲಾಗಿದೆ.

ಟೆಂಪೊ, ಆಂಬುಲೆನ್ಸ್‌, ಕಾರು, ಜೀಪು, ವ್ಯಾನು, ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈವರೆಗೆ ಲಘುವಾಹನಗಳು ಹಗಲಿನಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಇತ್ತು.

ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌, ಆರು ಚಕ್ರದ ಲಾರಿಗಳು ಹಗಲಿನಲ್ಲಿ (ಬೆಳಿಗ್ಗೆ 6ರಿಂದ ಸಂಜೆ 7 ಗಂಟೆ) ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.