ADVERTISEMENT

ಚಾರ್ಮಾಡಿ ಘಾಟಿಯಲ್ಲಿ ಸಿಲುಕಿದ ಟ್ಯಾಂಕರ್: ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 5:03 IST
Last Updated 27 ಅಕ್ಟೋಬರ್ 2025, 5:03 IST
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಿಗ್ಗೆ ಟ್ಯಾಂಕರ್ ಸಿಲುಕಿದ್ದರಿಂದ ವಾಹ ಸಂಚಾರಕ್ಕೆ ಅಡ್ಡಿಯಾಗಿತ್ತು
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಿಗ್ಗೆ ಟ್ಯಾಂಕರ್ ಸಿಲುಕಿದ್ದರಿಂದ ವಾಹ ಸಂಚಾರಕ್ಕೆ ಅಡ್ಡಿಯಾಗಿತ್ತು   

ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಿಗ್ಗೆ ಹತ್ತು ಚಕ್ರದ ಟ್ಯಾಂಕರ್ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತ್ತು.

'ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಬಳಿಕ ಟ್ಯಾಂಕರನ್ನು ಬದಿಗೆ ಸರಿಸಿ ಒಂದೇ ಬದಿಯಲ್ಲಿ ಎರಡೂ ಕಡೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಯಿತು. ‌ಇದರಿಂದ ಇಡೀ ದಿನ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಇದರಿಂದ ಬಸ್‌ಗಳು ಸರಿಯಾದ ಸಮಯಕ್ಕೆ ತಲುಪದೇ ಪ್ರಯಾಣಿಕರು ಪರದಾಡಿದರು’ ಎಂದು ಸ್ಥಳೀಯರು ತಿಳಿಸಿದರು.

‘ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧವಿದ್ದರೂ, ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಟ್ಯಾಂಕರ್‌ನ್ನು ತಡೆಯದ ಕಾರಣ ಸಮಸ್ಯೆಯಾಗಿದೆ. ಘಾಟಿಯಲ್ಲಿ ಭಾರಿ ವಾಹನಗಳನ್ನು ಬಿಡಬಾರದು ಎಂದು ಘಾಟಿಯಲ್ಲಿ ಸಿಲುಕಿದ್ದ ವಾಹನ ಸವಾರ ಸುಬ್ರಮಣ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.