ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಇದೇ 11ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
‘ಮಳೆಯಿಂದಾಗಿ ಈ ಮಾರ್ಗದ ಕೆಲವೆಡೆ ಗುಡ್ಡದ ಮಣ್ಣು ಕುಸಿದಿದೆ. ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು, ಎಂಜಿನಿಯರ್‌ಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಾರ್ಯಾಚರಣೆಗಾಗಿ ನಾಲ್ಕು ದಿನ ವಾಹನ ಸಂಚಾರ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಕರಾವಳಿ ಭಾಗಕ್ಕೆ ಮೂಡಿಗೆರೆ ಹ್ಯಾಂಡ್‌ಪೋಸ್ಟ್– ಜನ್ನಾಪುರ– ಆನೆಮಹಲ್– ಶಿರಾಡಿ– ಗುಂಡ್ಯ ಹೆದ್ದಾರಿ (ಎನ್‌ಎಚ್–75) ಮೂಲಕ ಸಂಚರಿಸಬಹುದು‘ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.