ADVERTISEMENT

ಏಕರೂಪ ಪರೀಕ್ಷಾ ವೇಳಾಪಟ್ಟಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 8:26 IST
Last Updated 17 ಜನವರಿ 2023, 8:26 IST
ಕಡೂರು ಪಟ್ಟಣದ ಹೊರವಲಯದಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಿಜಿ ಸೆಂಟರ್ ಬಳಿ ಎಬಿವಿಪಿ ಘಟಕದ ಕಾರ್ಯಕರ್ತರು ಸ್ನಾತಕ ವಿಭಾಗದ ವಿದ್ಯಾರ್ಥಿಗಳಿಗೆ ಏಕರೂಪ ಪರೀಕ್ಷಾ ವೇಳಾಪಟ್ಟಿ ಜಾರಿಗೊಳಿಸುವಂತೆ ಒತ್ತಾಯಿಸಿ ಕೇಂದ್ರದ ನಿರ್ದೇಶಕ ಡಾ.ಸತ್ಯನಾರಾಯಣ್ ಅವರಿಗೆ ಮನವಿ ಸಲ್ಲಿಸಿದರು. ರವಿತೇಜ, ಹೇಮಂತ್, ಭರತ್ ಇದ್ದರು.

ಕಡೂರು: ವಿಶ್ವವಿದ್ಯಾಲಯದ ಸ್ನಾತಕ ವಿಭಾಗದ ವಿದ್ಯಾರ್ಥಿಗಳಿಗೆ ಏಕರೂಪ ಪರೀಕ್ಷಾ ವೇಳಾಪಟ್ಟಿ ಜಾರಿಗೊಳಿಸುವಂತೆ ಒತ್ತಾಯಿಸಿ ಎಬಿವಿಪಿ ಘಟಕದ ಕಾರ್ಯಕರ್ತರು ಪಟ್ಟಣದ ಹೊರವಲಯದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಕ್ಕೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಎಪಿವಿಪಿ ಘಟಕದ ತಾಲ್ಲೂಕು ಸಂಚಾಲಕ ರವಿತೇಜ ಮಾತನಾಡಿ, ‘ಸ್ಪಷ್ಟತೆ ಇಲ್ಲದೆ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸ್ನಾತಕ ವಿಭಾಗದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪರೀಕ್ಷೆಯನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳ ಬೇಡಿಕೆಯಂತೆ ಏಕರೂಪ ವೇಳಾಪಟ್ಟಿಯನ್ನು ಜಾರಿಗೊಳಿಸಬೇಕಿದೆ. ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕವನ್ನು ಕೂಡಲೇ ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.

ಈ ಕುರಿತು ಮನವಿಯನ್ನು ಕಡೂರು ಪಿಜಿ ಸೆಂಟರ್ ನಿರ್ದೇಶಕ ಡಾ.ಸತ್ಯನಾರಾಯಣ್ ಅವರಿಗೆ ಸಲ್ಲಿಸಲಾಯಿತು.

ADVERTISEMENT

ಎಬಿವಿಪಿ ಘಟಕದ ಪದಾಧಿಕಾರಿಗಳಾದ ಚಂದನ್, ಹೇಮಂತ್, ಭರತ್, ಚಂದು, ಸುಮಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.