ADVERTISEMENT

ಹವ್ವಳ್ಳಿ ಗ್ರಾಮದಲ್ಲಿ 160ನೇ ವಿವೇಕಾನಂದ ಜಯಂತಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 8:23 IST
Last Updated 17 ಜನವರಿ 2023, 8:23 IST
ಹವ್ವಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ಹವ್ವಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.   

ಆಲ್ದೂರು: ಪಟ್ಟಣದ ಸಮೀಪವಿರುವ ಹವ್ವಳ್ಳಿ ಗ್ರಾಮದಲ್ಲಿ 160ನೇ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೃಥ್ವಿ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸರೋಜಮ್ಮ, ಪಂಚಾಯಿತಿ ಸದಸ್ಯ ಗಿರೀಶ್, ಗ್ರಂಥಪಾಲಕ ಕೆಂಚಯ್ಯ, ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ರಾಜೇಶ್ ಎಚ್.ಎಂ, ಸದಸ್ಯರು ಇದ್ದರು.

ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.