ADVERTISEMENT

ರಂಭಾಪುರಿ ಪೀಠದಲ್ಲಿ ಮಾರ್ಚ್‌ 3ರಿಂದ ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 6:26 IST
Last Updated 22 ಫೆಬ್ರುವರಿ 2023, 6:26 IST
ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ
ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ   

ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ ಮಾರ್ಚ್‌ 3ರಿಂದ 7ರವರೆಗೆ ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಮಾರ್ಚ್‌ 4ರಂದು ಸಂಜೆ ವೀರಭದ್ರಸ್ವಾಮಿ ವಿಜಯೋತ್ಸವ ಹಾಗೂ ಜಾನಪದ ಹಬ್ಬವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸುವರು. ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ‘ಶ್ರೀಪೀಠದ ದಾಖಲೆ ಸಂಪುಟ-2’ ಅನ್ನು ಬಿಡುಗಡೆಗೊಳಿಸುವರು. ಶಾಸಕರಾದ ಈಶ್ವರ ಖಂಡ್ರೆ, ಬೆಳ್ಳಿಪ್ರಕಾಶ ಮತ್ತು ಡಿ.ಎಸ್.ಸುರೇಶ್‌, ಜಾನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್.ಜಾನಪದ ಬಾಲಾಜಿ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್, ಹೋಬಳಿ ಅಧ್ಯಕ್ಷ ಸುನೀಲರಾಜ್ ಭಂಡಾರಿ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ, ಮಳಲಿ ಸಂಸ್ಥಾನ ಮಠದ ನಾಗಭೂಷಣ ಶಿವಾ ಚಾರ್ಯ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮಾರ್ಚ್‌ 5ರ ಬೆಳಿಗ್ಗೆ ಜಗದ್ಗುರು ರೇಣುಕಾಚಾರ್ಯ ಜಯಂತಿ, ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ, ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ಶಿವಾದ್ವೈತ ಧರ್ಮ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರದ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ, ಸಚಿವರಾದ ಸಿ.ಸಿ.ಪಾಟೀಲ, ವಿ.ಸುನಿಲ್ ಕುಮಾರ್, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಸಿ.ಟಿ.ರವಿ, ಟಿ.ಡಿ.ರಾಜೇಗೌಡ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಡಾ.ಬೇಳೂರು ರಾಘವೇಂದ್ರ ಶೆಟ್ಟಿ, ಬಸಯ್ಯ ಕಾಡಯ್ಯ ಹಿರೇಮಠ, ಡಾ.ಕೃಷ್ಣಾರೆಡ್ಡಿ, ಸಿ.ಮೃತ್ಯುಂಜಯಸ್ವಾಮಿ, ಮಲ್ಲಿಕಾರ್ಜುನ ಬಿ.ಗುಂಗೆ, ಸೋಮನಾಥ ಗೋರಟಾ, ಎಂ.ಎಸ್.ದಿವಾಕರ ಭಾಗವಹಿಸುವರು ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ಪೀಠದ ಅತ್ಯುನ್ನತ ಪ್ರಶಸ್ತಿಯಾದ ‘ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ’ಯನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರದಾನ ಮಾಡಲಾಗುವುದು. ‘ರಂಭಾಪುರಿ ಬೆಳಗು’ ಮಾಸ ಪತ್ರಿಕೆಯನ್ನು ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಇಲಾಖೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಬಿಡುಗಡೆ ಮಾಡಲಿದ್ದಾರೆ. ಪೀಠದಲ್ಲಿ ನಿರ್ಮಾಣಗೊಳ್ಳಲಿರುವ 51 ಅಡಿ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಕಾರ್ಯಾರಂಭದ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೂಲಪೀಠದ ನವೀಕರಣದ ಶಿಲಾನ್ಯಾಸವನ್ನು ಬಿ.ಎಸ್. ಯಡಿಯೂರಪ್ಪನವರು ನೆರವೇರಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಪೀಠದ ಮುಂಭಾಗದ ನೂತನ ರಸ್ತೆ ಉದ್ಘಾಟನೆ ಮಾಡುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ, ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯ, ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಭಾಗವಹಿಸುವರು ಎಂದಿದ್ದಾರೆ.

6ರ ಸಂಜೆ ‘ನೇಗಿಲ ಯೋಗಿಯ ನೆನಹು’ ಕಾರ್ಯಕ್ರಮವನ್ನು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ‘ಡಾ.ಗುರುದೇವ ಶಿವಾಚಾರ್ಯ ಜೀವನ ದರ್ಶನ’ ಕೃತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಲೋಕಾರ್ಪಣೆ ಮಾಡುವರು. ಜಂಗಮ ವಾಹಿನಿ ನೂತನ ಪತ್ರಿಕೆಯನ್ನು ಎಚ್.ಎಂ.ಲೋಕೇಶ್ ಬಿಡುಗಡೆಗೊಳಿ
ಸುವರು. ಎಸ್.ಎಲ್. ಭೋಜೇಗೌಡ, ಬಿ.ಬಿ.ನಿಂಗಯ್ಯ, ಗಾಯತ್ರಿ ಶಾಂತೇ ಗೌಡ, ವೀರೇಶ ಪಾಟೀಲ, ಶ್ರೀನಿವಾಸ ರೆಡ್ಡಿ, ಬಂಕಾಪುರದ ರೇವಣಸಿದ್ಧೇಶ್ವರ ಶಿವಾಚಾರ್ಯ, ನೆಗಳೂರಿನ ಗುರು ಶಾಂತೇಶ್ವರ ಶಿವಾಚಾರ್ಯ, ಮಾನ್ವಿಯ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ, ನರಗುಂದದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.