ADVERTISEMENT

ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ: ಜೋಷಿ, ನಿಂಗಯ್ಯ ಸಂತಸ

ಉದ್ಯೋಗಾಧಾರಿತ ಕೌಶಲ ಅಭಿವೃದ್ಧಿ ತರಬೇತಿ ಸಮಾರೋಪ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 6:26 IST
Last Updated 9 ಜುಲೈ 2022, 6:26 IST
ನರಸಿಂಹರಾಜಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಮುಕ್ತಾಯಗೊಂಡ ಉದ್ಯೋಗಾಧಾರಿತ ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ನೀಡಲಾಯಿತು. ‌ಡಾ.ಕೆ.ಉಮೇಶ್, ಶ್ರೀನಿಧಿ ಇದ್ದರು.
ನರಸಿಂಹರಾಜಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಮುಕ್ತಾಯಗೊಂಡ ಉದ್ಯೋಗಾಧಾರಿತ ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ನೀಡಲಾಯಿತು. ‌ಡಾ.ಕೆ.ಉಮೇಶ್, ಶ್ರೀನಿಧಿ ಇದ್ದರು.   

ಕಳಸ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರುರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅತ್ಯಂತ ಔಚಿತ್ಯಪೂರ್ಣವಾದುದು ಎಂದು ಹೊರನಾಡಿನ ಜಿ.ಭೀಮೇಶ್ವರ ಜೋಷಿ ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ, ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಹೆಗ್ಗಡೆಯವರಿಗೆ ರಾಜ್ಯಸಭಾ
ಸ್ಥಾನ ನೀಡಿದ್ದರಿಂದ ಸದನದ ಗೌರವ ಹೆಚ್ಚಲಿದೆ ಎಂದು ಜೋಷಿ ತಿಳಿಸಿದ್ದಾರೆ.

ನಿಂಗಯ್ಯ ಹರ್ಷ: ವೀರೇಂದ್ರ ಹೆಗ್ಗಡೆ ಅವರ ರಾಜ್ಯಸಭಾ ಸ್ಥಾನದ ಬಗ್ಗೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಹೆಗ್ಗಡೆಯವರ ಆಯ್ಕೆಯಿಂದ ವಿವಿಧ ಕ್ಷೇತ್ರಗಳಲ್ಲಿನ ಅವರ ಸೇವೆ ಇಡೀ ದೇಶಕ್ಕೆ ವಿಸ್ತರಿಸಲು ಅವಕಾಶ ಆಗಲಿದೆ. ಅವರ ಮಾರ್ಗದರ್ಶನ ದೇಶಕ್ಕೆ ಸಿಕ್ಕರೆ ಸಾರ್ವಜನಿಕರ ಕೆಲಸ ಇನ್ನಷ್ಟು ಉತ್ತಮವಾಗಿ ನಡೆಯಬಹುದು ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.