ADVERTISEMENT

‘ಈಶ್ವರೀಯವಿವಿಯಿಂದ 75 ಲಕ್ಷ ಸಸಿ ನೆಡುವ ಯೋಜನೆ’

ಯೋಗ ದಿನ, ಪರಿಸರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 2:27 IST
Last Updated 24 ಜೂನ್ 2022, 2:27 IST
ನರಸಿಂಹರಾಜಪುರದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಚಿಕ್ಕಮಗಳೂರು ಭಾರತ್ ಸ್ವಾಭಿಮಾನ್ ಟ್ರಸ್ಟ್ ಯೋಗ ಶಿಕ್ಷಕ ದಿವಾಕರ್ ಭಟ್ ಅವರನ್ನು ಸನ್ಮಾನಿಸಲಾಯಿತು.
ನರಸಿಂಹರಾಜಪುರದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಚಿಕ್ಕಮಗಳೂರು ಭಾರತ್ ಸ್ವಾಭಿಮಾನ್ ಟ್ರಸ್ಟ್ ಯೋಗ ಶಿಕ್ಷಕ ದಿವಾಕರ್ ಭಟ್ ಅವರನ್ನು ಸನ್ಮಾನಿಸಲಾಯಿತು.   

ನರಸಿಂಹರಾಜಪುರ: ‘ಯೋಗ ಎಂಬುದು ಬ್ರಹ್ಮವಿದ್ಯೆಯಾಗಿದ್ದು, ಪ್ರಪಂಚದಾದ್ಯಂತ 50 ಕೋಟಿ ಜನರು ಪ್ರತಿನಿತ್ಯ ಯೋಗಾಸನ ಮಾಡುತ್ತಿದ್ದಾರೆ’ ಎಂದು ಚಿಕ್ಕಮಗಳೂರಿನ ಯೋಗ ಶಿಕ್ಷಕ ದಿವಾಕರ್ ಭಟ್ ತಿಳಿಸಿದರು.

ಇಲ್ಲಿನ ಅಗ್ರಹಾರದ ಉಮಾಮಹೇಶ್ವರ ಸಭಾಭವನದಲ್ಲಿ ತಾಲ್ಲೂಕು ಬಿಜೆಪಿ ಪ್ರಕೋಷ್ಠ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಹಿಳಾ ಘಟಕ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿಶ್ವಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ.ಪ್ರಮೀಳಾ ಮಾತನಾಡಿ, ದೇಶದಾದ್ಯಂತ ಈಶ್ವರೀಯ ವಿಶ್ವವಿದ್ಯಾಲಯದಿಂದ 75 ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ’ಯೋಗವು ಭಾರತದ ಪ್ರಾಚೀನ ಕಲೆಯಾಗಿದೆ ಯೋಗಕ್ಕೆ 6,000 ವರ್ಷಗಳ ಇತಿಹಾಸವಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷ ಡಾ.ಮಹೇಶ್ ಭಂಡಾರಿ ಮಾತನಾಡಿ, ‘ಯೋಗವು ಮನಸ್ಸು ಹಾಗೂ ಆತ್ಮವನ್ನು ಸಂಕಲನಗೊಳಿಸುತ್ತದೆ. ಯೋಗದಿಂದ ರೋಗಗಳನ್ನು ನಿಯಂತ್ರಣದಲ್ಲಿಡಬಹುದು ಎಂದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಎಚ್.ಬಿ. ರಘುವೀರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಅರುಣ್ ಕುಮಾರ್, ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ಕಾಂತರಾಜ್, ರೋಟರಿ ಅಧ್ಯಕ್ಷ ಪಿ.ಪ್ರಭಾಕರ್, ಉಪ ವಲಯ ಅರಣ್ಯಾಧಿಕಾರಿ ಗೌಸ್ ಮೊಹಿದ್ದೀನ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಪಿ.ಜೇಮ್ಸ್, ಸಾವಿತ್ರಿ, ಗುಣಪಾಲ್ ಜೈನ್, ರಶ್ಮಿ ದಯಾನಂದ್ ಇದ್ದರು. ಎಲ್ಲರಿಗೂ ಮಾವು, ಹಲಸು ಸಸಿಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.