ಚಿಕ್ಕಮಗಳೂರು: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ₹25 ಸಾವಿರ ಲಂಚ ಪಡೆಯುತ್ತಿದ್ದ, ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರ ದೇಸಾಯಿ ಬಾಕಿ ಬಿಲ್ ಪಾವತಿಗೆ ಕೋರಿದ್ದರು. ₹7.50 ಲಕ್ಷ ಪಾವತಿಗೆ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ₹25 ಸಾವಿರ ಪಡೆಯುವಾಗ ಸಿಕ್ಕಿಬಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.