ಪೊಲೀಸ್
(ಸಾಂದರ್ಭಿಕ ಚಿತ್ರ)
ಶೃಂಗೇರಿ: ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಹಿಂದೂಗಳ ಹತ್ಯೆ ಮತ್ತು ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ಶೃಂಗೇರಿ ಬಂದ್ ಹಾಗೂ ಪ್ರತಿಭಟನೆಗೆ ಕರೆ ನೀಡುವ ಪೂರ್ವದಲ್ಲಿ ಅನುಮತಿ ಪಡೆದಿಲ್ಲ ಎಂದು ಆರೋಪಿಸಿ, ಒಂಬತ್ತು ಜನರ ಮೇಲೆ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರಾದ ದಿವೀರ್ ಮಲ್ನಾಡ್, ಸಂತೋಷ್, ಎಚ್.ಎಸ್ ವೇಣುಗೋಪಾಲ್, ವಿ.ಎಸ್ ಹರೀಶ್ ಶೆಟ್ಟಿ, ಸುನಿಲ್ ಜೋಗಿಬೈಲ್, ಎಚ್.ಎಸ್ ಸುಬ್ರಹ್ಮಣ್ಯ, ಸುನಿಲ್ ಸಂಪೆಕೋಳಲು, ರಮೇಶ್ ಕೆ.ಎಸ್, ಪುನೀತ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಬಂದ್ ವೇಳೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ಶೃಂಗೇರಿಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಶೃಂಗೇರಿ ಕುವೆಂಪು ಬಸ್ ನಿಲ್ದಾಣದಿಂದ ವೀರಪ್ಪಗೌಡ ವೃತ್ತದವರೆಗೆ (ಶಂಕರಚಾರ್ಯ ವೃತ್ತ) ಮೆರವಣಿಗೆಯಲ್ಲಿ ತೆರಳಿ, ಪೊಲೀಸ್ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ, ವೃತ್ದ ಬಳಿ ಪಾದಚಾರಿಗಳು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದಾರೆ. ಈ ಕಾರಣಕ್ಕೆ ಪ್ರಕರಣ ದಾಖಲಾಗಿದೆ’ ಎಂದು ಶೃಂಗೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.