
ಜೈಲು (ಪ್ರಾತಿನಿಧಿಕ ಚಿತ್ರ)
ಚಿಕ್ಕಮಗಳೂರು: ₹1 ಸಾವಿರಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದೆ.
ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ರೈಲ್ವೆ ಕ್ಯಾಂಪ್ ನಿವಾಸಿ ಮಂಜುನಾಥ (39) ಶಿಕ್ಷೆಗೆ ಒಳಗಾಗಿರುವ ಅಪರಾಧಿ. 2021ರ ಜುಲೈ 27ರಂದು ವೆಂಕಟಾಚಲಪತಿ ಎಂಬವರ ಕೊಲೆ ಅಜ್ಜಂಪುರದಲ್ಲಿ ನಡೆದಿತ್ತು.
ಮಂಜುನಾಥ ಮತ್ತು ಮೃತ ವೆಂಕಟಾಚಲಪತಿ ಇಬ್ಬರೂ ಅಜ್ಜಂಪುರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ವೆಂಕಟಾಚಲಪತಿ ಕೊಡಬೇಕಿದ್ದ ₹1 ಸಾವಿರವನ್ನು ಮಂಜುನಾಥ ಕೇಳಿದ್ದು, ಈ ವೇಳೆ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೆಂಕಟಾಚಲಪರಿ ರಂಗ ಮಂದಿರದಲ್ಲಿ ಮಲಗಿದ್ದಾಗ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಅಜ್ಜಂಪುರ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮಂಗಳವಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.