ADVERTISEMENT

ಚಿಕ್ಕಮಗಳೂರು DCC ಬ್ಯಾಂಕ್: CT ರವಿ, ಭೋಜೇಗೌಡ ಗೆಲುವು, ಕಾಂಗ್ರೆಸ್ ಶಾಸಕಗೆ ಸೋಲು

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 16:17 IST
Last Updated 17 ಜನವರಿ 2026, 16:17 IST
   

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

13 ನಿರ್ದೇಶಕ ಸ್ಥಾನಗಳಲ್ಲಿ 8 ಸ್ಥಾನಗಳಿಗೆ ಕಡೂರು ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಸೇರಿದಂತೆ ಅವಿರೋಧ ಆಯ್ಕೆಯಾಗಿತ್ತು. ಉಳಿದ 5 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎರಡೂ ಪಕ್ಷಗಳ ಆಂತರಿಕ ಒಪ್ಪಂದದಂತೆ 11 ಸ್ಥಾನ ಬಿಜೆಪಿ ಮತ್ತು 2 ಸ್ಥಾನ ಜೆಡಿಎಸ್‌ಗೆ ಹಂಚಿಕೆಯಾಗಿತ್ತು. ಅದೇ ರೀತಿಯ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಮತ್ತು 2 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಮೇಲ್ಮನೆ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಜಯ ಸಾಧಿಸಿದರೆ, ವ್ಯವಸಾಯೋತ್ಪನ್ನ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಡೂರಿನ ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಸೋತರು. 

ADVERTISEMENT

ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡಾ ಸೋಲನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.