ADVERTISEMENT

ಚಿಕ್ಕಮಗಳೂರು | ಇಂದಿನಿಂದ ದೇವೀರಮ್ಮ ಉತ್ಸವ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 6:18 IST
Last Updated 19 ಅಕ್ಟೋಬರ್ 2025, 6:18 IST
ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ದೇಗುಲ ಶನಿವಾರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿರುವುದು
ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ದೇಗುಲ ಶನಿವಾರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿರುವುದು   

ಚಿಕ್ಕಮಗಳೂರು: ಬೆಟ್ಟದ ತುದಿಯಲ್ಲಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಬಿಂಡಿಗ ದೇವೀರಮ್ಮ ಉತ್ಸವ ಭಾನುವಾರದಿಂದ ಆರಂಭವಾಗಲಿದ್ದು, ದೇವೀರಮ್ಮ ಅಭಿವೃದ್ಧಿ ಟ್ರಸ್ಟ್ ಮತ್ತು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಭಾನುವಾರ ಬೆಳಿಗ್ಗೆ 7 ಗಂಟೆಗೆ ದೇವಿರಮ್ಮ ಬೆಟ್ಟದಲ್ಲಿ ಅಭಿಷೇಕ ಪೂಜೆ ನಡೆಸಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ತನಕ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಇದೆ. ಮರುದಿನ ಸೋಮವಾರ ಕೂಡ ಬೆಳಿಗ್ಗೆ 7ರಿಂದ ಪೂಜೆ ಮಧ್ಯಾಹ್ನ 3 ಗಂಟೆ ತನಕ ಮಾತ್ರ ದರ್ಶನಕ್ಕೆ ಅವಕಾಶ ಇದ್ದು, ಸಂಜೆ 7 ಗಂಟೆಗೆ ದೀಪೋತ್ಸವ ನಡೆಯಲಿದೆ.

ಇದೇ ಮೊದಲ ಬಾರಿಗೆ ಎರಡು ದಿನ ಅವಕಾಶ ನೀಡಲಾಗಿದೆ. ರಾತ್ರಿ ವೇಳೆ ಭಕ್ತರು ಬೆಟ್ಟ ಹತ್ತುವುದನ್ನು ನಿಷೇಧಿಸಲಾಗಿದೆ. ಪ್ರತಿದಿನ ಮಳೆ ಸುರಿಯುತ್ತಿದ್ದು, ಶನಿವಾರ ರಾತ್ರಿ ಕೂಡ ಸುರಿದಿದೆ. ಭಕ್ತರು ಬರಿಗಾಲಿನಲ್ಲಿ ಬೆಟ್ಟ ಹತ್ತುವುದರಿಂದ ಸುರಕ್ಷತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿದೆ.

ADVERTISEMENT

ಅ.26ರವರೆಗೆ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಟ್ಟ ಹತ್ತುವ ಭಕ್ತರು ವೈಯಕ್ತಿಕ ರಕ್ಷಣೆ ಹಾಗೂ ಸುರಕ್ಷತೆ ವಹಿಸಬೇಕು. ಅಗತ್ಯ ಇರುವ ಸುರಕ್ಷತಾ ಸಾಮಗ್ರಿಗಳನ್ನು ಭಕ್ತರೂ ತರಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಭಕ್ತರು, ಸಾರ್ವಜನಿಕರು ಹಾಗೂ ಪ್ರವಾಸಿಗರ ರಕ್ಷಣಾ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಕ್ತ ಮುಂಜಾಗೃತಾ ಕ್ರಮ ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.