ADVERTISEMENT

ಚಿಕ್ಕಮಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 23 ಮೇ 2025, 6:41 IST
Last Updated 23 ಮೇ 2025, 6:41 IST
   

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಿಗ್ಗೆಯಿಂದಲೇ ಧಾರಾಕಾರ ಮಳೆ ಆರಂಭವಾಗಿದ್ದು, ಎಡಬಿಡದೆ ಸುರಿಯುತ್ತಿದೆ.

ಮೂಡಿಗೆರೆ, ಕೊಟ್ಟಿಗೆಹಾರ, ಮುಳ್ಳಯ್ಯನಗಿರಿ, ಕುದುರೆಮುಖ, ಕಳಸ, ಶೃಂಗೇರಿ, ಕೆರೆಕಟ್ಟೆ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಆಲ್ದೂರು, ಎನ್.ಆರ್.ಪುರ, ಚಿಕ್ಕಮಗಳೂರು ನಗರ, ಕೆಮ್ಮಣ್ಣುಗುಂಡಿ ಸುತ್ತಮುತ್ತ ಮಳೆ ಸುರಿಯುತ್ತಿದೆ.

ಮಲೆನಾಡು ಭಾಗದಲ್ಲಿ ಮನೆಯಿಂದ ಜನ ಹೊರ ಬರಲು ಸಾಧ್ಯವಾಗದ ಸ್ಥಿತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಬೆಳಿಗ್ಗೆಯಿಂದ ಸುರಿದ ಮಳೆಗೆ ಚಿಕ್ಕಮಗಳೂರು ನಗರದ ಆಟದ ಮೈದಾನದಲ್ಲಿ ಮಳೆ ನೀರು ತುಂಬಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.