ಮಳೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ತೀವ್ರಗೊಂಡಿದ್ದು, ಮಲೆನಾಡು ಭಾಗದ ಆರು ತಾಲ್ಲೂಕುಗಳ ಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಡಳಿತ ಜು.4ರಂದು ರಜೆ ಘೋಷಣೆ ಮಾಡಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕುಗಳ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿ, ಶಿಶುಪಾಲನಾ ಕೇಂದ್ರಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.