ADVERTISEMENT

ಚಿಕ್ಕಮಗಳೂರು | ಮಂಗನ ಕಾಯಿಲೆ: ತಿಂಗಳಲ್ಲಿ 9 ಪ್ರಕರಣ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 20:44 IST
Last Updated 29 ಜನವರಿ 2026, 20:44 IST
<div class="paragraphs"><p>ಮಂಗನ ಕಾಯಿಲೆ</p></div>

ಮಂಗನ ಕಾಯಿಲೆ

   

ಸಾಂದರ್ಭಿಕ ಚಿತ್ರ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿ ತಿಂಗಳಲ್ಲಿ 9 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ADVERTISEMENT

ನರಸಿಂಹರಾಜಪುರ ತಾಲ್ಲೂಕಿನ ಮೇಲ್ಪಾಲ್ ಮತ್ತು ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಸುತ್ತಮುತ್ತ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಒಟ್ಟು ಒಂಬತ್ತು ಪ್ರಕರಣಗಳಲ್ಲಿ 12 ವರ್ಷದ ಬಾಲಕ ಮತ್ತು 7 ತಿಂಗಳ ಬಾಲಕಿ ಸೇರಿದ್ದಾರೆ.

ಏಳು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಹೋಗಿದ್ದಾರೆ. 7 ತಿಂಗಳ ಬಾಲಕಿ ಮತ್ತು 36 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೊಪ್ಪ ಮತ್ತು ನರಸಿಂಹರಾಜಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.