ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಬಳಿಯ ಅಯ್ಯನಕೆರೆ ಶನಿವಾರ ತುಂಬಿ ಕೋಡಿ ಹರಿಯಲಾರಂಭಿಸಿದೆ.
ಅಯ್ಯನಕೆರೆ ತಾಲ್ಲೂಕಿನ ಅತ್ಯಂತ ದೊಡ್ಡ ಕೆರೆಯಾಗಿದ್ದು, ತಾಲ್ಲೂಕಿನ ವಿಷ್ಣುಸಮುದ್ರ ಕೆರೆ ಸೇರಿದಂತೆ 30ಕ್ಕೂ ಹೆಚ್ಚು ಆಶ್ರಿತ ಕೆರೆಗಳಿವೆ.
ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಪ್ರವಾಸಿಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ತರೀಕೆರೆ ಉಪವಿಭಾಗಾಧಿಕಾರಿ ಡಾ.ಕಾಂತರಾಜು ಆದೇಶ ಹೊರಡಿಸಿದ್ದಾರೆ. ಕೆರೆ ಕಡೆ ತೆರಳುವ ಮಾರ್ಗದಲ್ಲಿ ಪೊಲೀಸರು ಬ್ಯಾರಿ ಕೇಡ್ ಅಳವಡಿಸಿ ವಾಹನ ಸಂಚಾರ ಬಂದ್ ಮಾಡಿದ್ದಾರೆ.
ಶುಕ್ರವಾರ ಭರ್ತಿಯಾಗಿ ಕೋಡಿ ಹರಿಯಲಾರಂಭಿಸಿದ ಮದಗದಕೆರೆ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಪ್ರವಾಹದ ಭೀತಿ ಎದುರಾಗಿದೆ, ಕೆರೆ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ತಾಲ್ಲೂಕು ಆಡಳಿತ ನಿರ್ಬಂಧ ಹೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.