ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ, ರಸ್ತೆಗೆ ಮಣ್ಣು ಕುಸಿತ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ನೆಮ್ಮಾರ್ ಬಳಿ ರಸ್ತೆಗೆ ಗುಡ್ಡದ ಮಣ್ಣು ಕುಸಿದಿದ್ದು, ಶೃಂಗೇರಿ-ಕಾರ್ಕಳ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ರಸ್ತೆಗೆ ಬಿದ್ದಿರುವ ಮಣ್ಣನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ. ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಕೊಟ್ಟಿಗೆಹಾರ ಸುತ್ತಮುತ್ತ ರಾತ್ರಿ ವೇಳೆಯಂತೂ ರಸ್ತೆಯೇ ಕಾಣದ ಸ್ಥಿತಿ ಇದೆ. ಹಗಲಿನಲ್ಲೂ ಮಂಜು ಮತ್ತು ಮಳೆಯ ನಡುವೆ ವಾಹನ ಸಂಚಾರ ಕಷ್ಟವಾಗಿದೆ. ಘಾಟಿಯ ತಿರುವು ರಸ್ತೆಗಳಲ್ಲಿ ಆತಂಕದ ನಡುವೆ ಚಾಲಕರು ವಾಹನ ಚಾಲನೆ ಮಾಡುತ್ತಿದ್ದಾರೆ. ಅಲ್ಲಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ.
ಮಳೆ ಜೋರಾಗಿರುವುದರಿಂದ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಕಳಸ ಮತ್ತು ಶೃಂಗೇರಿ ತಾಲ್ಲೂಕುಗಳ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.