ಅಜ್ಜಂಪುರ (ಚಿಕ್ಕಮಗಳೂರು): ತಾಲ್ಲೂಕಿನ ನಾರಣಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿದೆ.
ಶಿವಯ್ಯ ಎಂಬುವರ ಮನೆ ಬಳಿ ಬೋನು ಇರಿಸಲಾಗಿತ್ತು. ರಾತ್ರಿ 12 ಗಂಟೆಯ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿದ್ದು, ಅರಣ್ಯ ಇಲಾಖೆಯವರು ರಾತ್ರಿಯೇ ಚಿರತೆಯನ್ನು ಅಲ್ಲಿಂದ ಸಾಗಿಸಿದ್ದಾರೆ.
ಅಜ್ಜಂಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಿರತೆಗಳು ಹೆಚ್ಚಾಗಿವೆ. ಚಿರತೆ ಕಾಟ ಇರುವ ಗ್ರಾಮಸ್ಥರು ಚಿರತೆ ಸೆರೆ ಹಿಡಿಯಲು ಬೋನು ಇರಿಸುವಂತೆ ಅರಣ್ಯ ಇಲಾಖೆಗೆ ದುಂಬಾಲು ಬಿದ್ದಿದ್ದಾರೆ. ಆದರೆ, ಇಲಾಖೆಯಲ್ಲಿ ಕೇವಲ ನಾಲ್ಕು ಬೋನುಗಳು ಮಾತ್ರ ಇವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.