ADVERTISEMENT

ಚಿಕ್ಕಮಗಳೂರು | ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸಾವು: ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 0:50 IST
Last Updated 10 ಜುಲೈ 2025, 0:50 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಚಿಕ್ಕಮಗಳೂರು: ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮೃತಪಟ್ಟ ಇಬ್ಬರು ಬಾಲಕಿಯರ ಸಾವಿನ ಕುರಿತು ತನಿಖೆಗೆ ನಿವೃತ್ತ ನ್ಯಾಯಾಧೀಶೆ ಎಸ್.ಶೋಭಾ ಅವರನ್ನು ನೇಮಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌) ಆದೇಶಿಸಿದೆ.

ADVERTISEMENT

‘ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡಬೇಕು’ ಎಂದು ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದ ಜೂನ್‌ 29ರಂದು ವಸತಿ ಶಾಲೆ ಸ್ನಾನದ ಮನೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿತ್ತು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು, ವಿವಿಧ ಸಂಘಟನೆಗಳ ಮುಖಂಡರು ಮತ್ತು ಸ್ಥಳೀಯರು ಪ್ರತಿಭಟಿಸಿದ್ದರು. ಪ್ರಾಂಶುಪಾಲರು, ನಿಲಯ ಪಾಲಕರ ಅಮಾನತು ಮತ್ತು ತನಿಖೆಗೆ ಆಗ್ರಹಪಡಿಸಿದ್ದರು.

2023ರ ಜುಲೈ 27ರಂದು 9ನೇ ತರಗತಿಯ ಮತ್ತೊಬ್ಬ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿತ್ತು. ಎರಡು ಪ್ರಕರಣಗಳ ತನಿಖೆಗೆ ಆದೇಶಿಸಲಾಗಿದೆ. ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಸ್.ಶೋಭಾ ಅವರನ್ನು ತನಿಖಾಧಿಕಾರಿಯಾಗಿ, ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಕೆ.ಪಿ.ಶೈಲಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. 

‘ಮಹಿಳಾ ವಾರ್ಡನ್ ಇಲ್ಲ. ಮಕ್ಕಳು ಭಯದ ವಾತಾವರಣದಲ್ಲಿ ಇದ್ದಾರೆ. ಸಂಕಷ್ಟ ಹೇಳಿಕೊಳ್ಳಲು ಹೆದರುತ್ತಾರೆ’ ಎಂದು ಪೋಷಕರು ಅಳಲು ತೋಡಿಕೊಂಡಿದ್ದರು. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ಸಂಘಟನೆಗಳು ಪ್ರತಿಭಟಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.