ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮಾ.15 ರಿಂದ 17 ರವರೆಗೆ ಉರುಸ್ ಕಾರ್ಯಕ್ರಮ ನಡೆಯುತ್ತಿದ್ದು, ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಲಿದ್ದು, ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಗಾಳಿಕೆರೆ, ಮಾಣಿಕ್ಯಧಾರಾ ಜಲಪಾತ ತಾಣಗಳಿಗೆ ಭಕ್ತರು ಮತ್ತು ಸ್ಥಳೀಯರನ್ನು ಹೊರತುಪಡಿಸಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈಗಾಗಲೇ ಹೋಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಬುಕ್ಕಿಂಗ್ ಮಾಡಿಕೊಂಡವರಿಗೆ ಅವಕಾಶ ಇದೆ ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.