ನಗರದಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ಸುರಿದ ಮಳೆಗೆ ಕೊಡೆ ಹಿಡಿದು ಸಂಚರಿಸಿದ ಜನರು.
ಚಿಕ್ಕಮಗಳೂರು: ನಗರದಲ್ಲಿ ಶುಕ್ರವಾರ ಮಧ್ಯಾಹ್ನದ 1 ಗಂಟೆ ಕಾಲ ಮಳೆ ಸುರಿದಿದ್ದು, ಜನಸಾಮಾನ್ಯರು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯಿಂದ ಜು. 19ರಿಂದ 23ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವುದು ಹಾಗೂ ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ತೆರಳುವಾಗ ಹಾಗೂ ಚಾರಣಿಗರು ಟ್ರೆಕ್ಕಿಂಗ್ ಮಾಡುವಾಗ ಎಚ್ಚರಿಕೆ ವಹಿಸಿ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಕೋರಲಾಗಿದೆ.ನಗರದಲ್ಲಿ ಶುಕ್ರವಾರ ಮಧ್ಯಾಹ್ನದ 1 ಗಂಟೆ ಕಾಲ ಮಳೆ ಸುರಿದಿದ್ದು, ಜನಸಾಮಾನ್ಯರು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯಿಂದ ಜು. 19ರಿಂದ 23ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವುದು ಹಾಗೂ ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ತೆರಳುವಾಗ ಹಾಗೂ ಚಾರಣಿಗರು ಟ್ರೆಕ್ಕಿಂಗ್ ಮಾಡುವಾಗ ಎಚ್ಚರಿಕೆ ವಹಿಸಿ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.