ADVERTISEMENT

ಚಿಕ್ಕಮಗಳೂರು | ಮುಂದುವರಿದ ಮಳೆ: ಶಾಲೆ, ಅಂಗನವಾಡಿಗಳಿಗೆ ನಾಳೆ ರಜೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 15:23 IST
Last Updated 29 ಆಗಸ್ಟ್ 2025, 15:23 IST
<div class="paragraphs"><p>ಮಳೆ</p></div>

ಮಳೆ

   

–ಎ.ಐ ಚಿತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದ ಐದು ತಾಲ್ಲೂಕುಗಳು, ಚಿಕ್ಕಮಗಳೂರು ತಾಲ್ಲೂಕಿನ ಏಳು ಹೋಬಳಿ, ತರೀಕೆರೆ ತಾಲ್ಲೂಕಿನ ಎರಡು ಹೋಬಳಿಗಳ ಅಂಗನವಾಡಿ ಮತ್ತು ಶಾಲೆಗಳಿಗೆ ಶನಿವಾರ(ಆ.30) ರಜೆ ಘೋಷಿಸಲಾಗಿದೆ.

ADVERTISEMENT

ಎನ್.ಆರ್.ಪುರ, ಕೊಪ್ಪ, ಮೂಡಿಗೆರೆ, ಶೃಂಗೇರಿ, ಕಳಸ ಇಡೀ ತಾಲ್ಲೂಕಿನ ವ್ಯಾಪ್ತಿ, ಚಿಕ್ಕಮಗಳೂರು ತಾಲ್ಲೂಕಿನ ಕಸಬಾ, ಅಂಬಳೆ, ಆವತಿ, ಜಾಗರ, ವಸ್ತಾರೆ, ಆಲ್ದೂರು ಮತ್ತು ಖಾಂಡ್ಯ ಹೋಬಳಿ, ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಮತ್ತು ಲಿಂಗದಹಳ್ಳಿ ಹೋಬಳಿಗಳಿಗೆ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.