ADVERTISEMENT

ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 17:10 IST
Last Updated 26 ಜೂನ್ 2020, 17:10 IST
   

ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರನ್ನು ಬೆಂಗಳೂರಿಗೆ ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ಹಕೆ ಅಕ್ಷಯ್ ಮಚ್ಚಿಂದ್ರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

'ಚಿಕ್ಕಮಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದು ತೃಪ್ತಿ ನೀಡಿದೆ. ಇಲ್ಲಿನ ಜನರ ಪ್ರೀತಿ ಎಂದಿಗೂ ಮರೆಯಲಾಗುವುದಿಲ್ಲ' ಎಂದು ಹರೀಶ್ ಪಾಂಡೆ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.