
ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಮಾರ್ಚ್ 4ರಿಂದ 6ರ ವರೆಗೆ ಉರುಸ್ ನಡೆಯಲಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ವಾಹನಗಳಲ್ಲಿ ಬರಲಿದ್ದಾರೆ. ಹೀಗಾಗಿ ಮುಳ್ಳಯ್ಯನಗಿರಿ ಮತ್ತು ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಪ್ರವಾಸವನ್ನು ಮುಂದೂಡುವುದು ಸೂಕ್ತ ಎಂದು ಜಿಲ್ಲಾಡಳಿತ ತಿಳಿಸಿದೆ.
ಅಲ್ಲಿಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದೆ. ಉರುಸ್ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುವುದರಿಂದ ಅವಘಡ ಸಂಭವಿಸುವ ಸಾಧ್ಯತೆ ಇದೆ. ಉರುಸ್ ಸಂಬಂಧ ಆಗಮಿಸುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಉರುಸ್ ಕಾರ್ಯಕ್ರಮದ ಭಕ್ತರನ್ನು ಹೊರತುಪಡಿಸಿ ಇತರೆ ಪ್ರವಾಸಿಗರು ಪ್ರವಾಸ ಮುಂದೂಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.